ರಫೆಲ್ ಯುದ್ಧ ವಿಮಾನ ಖರೀದಿ: ಕೇಂದ್ರಕ್ಕೆ ಸುಪ್ರೀಂ ಬೆಂಬಲ! ರಾಹುಲ್ ಗಾಂಧಿಗೆ ಎಚ್ಚರಿಕೆ

ಡಿಜಿಟಲ್ ಕನ್ನಡ ಟೀಮ್:

ರಫೆಲ್ ಯುದ್ಧ ವಿಮಾನ ಖರೀದಿ ವಿಚಾರವಾಗಿ ನೀಡಿದ್ದ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಗುರುವಾರ ತೀರ್ಪು ಪ್ರಕಟಿಸಿದ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ತ್ರಿಸದಸ್ಯ ಪೀಠ, ರಫೆಲ್ ಯುದ್ಧ ವಿಮಾನ ಖರೀದಿ ಕಾನೂನು ವ್ಯಾಪ್ತಿಯಲ್ಲಿ ಪಾರದರ್ಶಕವಾಗಿ ನಡೆದಿದೆ. ಈ ವಿಚಾರದಲ್ಲಿ ತನಿಖೆ ನಡೆಸಲು ಯಾವುದೇ ಅಂಶಗಳು ವಿಚಾರಣೆ ಕಂಡುಬಂದಿಲ್ಲ ಎಂದು ಪೀಠ ಆದೇಶದಲ್ಲಿ ವಿವರಿಸಿದೆ.

ಇನ್ನು ರಫೆಲ್ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿದ್ದ ರಾಹುಲ್ ಗಾಂಧಿ ಅವರ ಬೆಷರತ್ ಕ್ಷಮೆಯನ್ನು ಕೋರ್ಟ್ ಸ್ವೀಕರಿಸಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಇಂತಹ ಹೇಳಿಕೆ ನೀಡದಂತೆ ಎಚ್ಚರಿಕೆ ನೀಡಿದೆ.

Leave a Reply