ಚಿದಂಬರಂ ಕೇಸ್ ವಾದ ಡಿಕೆಶಿಗೆ ಅನ್ವಯಿಸಬೇಡಿ; ಇಡಿಗೆ ಸುಪ್ರೀಂ ತಾಕೀತು

ಡಿಜಿಟಲ್ ಕನ್ನಡ ಟೀಮ್:

ಹಣಕಾಸು ಅವ್ಯವಹಾರ ಪ್ರಕರಣದಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಕೋರಿ ಜಾರಿ ನಿರ್ದೇಶನಾಲಯ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ.

ಇಡಿ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಆರ್.ಎಫ್ ನಾರಿಮನ್ ಹಾಗೂ ಎಸ್.ರವೀಂದ್ರ ಭಟ್ ಅವರ ಪೀಠ, ಇಡಿ ಪರ ವಕೀಲರನ್ನು ತರಾಟೆಗೆ ತೆಗದುಕೊಂಡರು. ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಪ್ರಕರಣದ ವಾದವನ್ನೇ ಸ್ವಲ್ಪವೂ ಬದಲಾವಣೆ ಮಾಡದೇ ಯಥಾವತ್ತಾಗಿ ಇಲ್ಲಿ ನೀಡಿದ್ದೀರಿ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿ ಅರ್ಜಿ ವಜಾಗೊಳಿಸಿದೆ.

ನ್ಯಾಯಾಲಯ ಈ ಆದೇಶ ಕಾನೂನು ಹೋರಾಟದಲ್ಲಿ ಡಿಕೆ ಶಿವಕುಮಾರ್ ಅವರಿಗೆ ದೊಡ್ಡ ಜಯವಾಗಿದೆ.

ಇದೇ ವೇಳೆ ಆದಾಯ ತೆರಿಗೆ ಇಲಾಖೆ ತಮ್ಮ ಮೇಲೆ ಮಾಡಿರುವ ಆರೋಪಗಳನ್ನು ವಜಾಗೊಳಿಸಬೇಕು ಎಂದು ಕೋರಿ ಡಿಕೆ ಶಿವಕುಮಾರ್ ಅವರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೋಟೀಸ್ ಜಾರಿ ಮಾಡಿದೆ.

Leave a Reply