ಸಾರ್ವಜನಿಕ ಆಸ್ತಿ ಹಾನಿ ಮಾಡಿದವರ ಆಸ್ತಿ ಮುಟ್ಟುಗೊಲಿಗೆ ಮುಂದಾದ ಯೋಗಿ ಸರ್ಕಾರ!

ಡಿಜಿಟಲ್ ಕನ್ನಡ ಟೀಮ್:

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಉತ್ತರ ಪ್ರದೇಶದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಭವಿಸಿದ ಹಿಂಸಾಚಾರದಲ್ಲಿ ಆದ ಸಾರ್ವಜನಿಕ ಆಸ್ತಿ ನಷ್ಟಯನ್ನು ಕಿಡಿಗೇಡಿಗಳಿಂದಲೇ ಭರಿಸಲು ಯೋಗಿ ಆದಿತ್ಯನಾಥ್ ಸರ್ಕಾರ ಮುಂದಾಗಿದೆ.

ಯಾರು ಸಾರ್ವಜನಿಕ ಆಸ್ತಿ ನಾಶ ಮಾಡುತ್ತಾರೋ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಂಡು ನಷ್ಟ ಭರಿಸುವುದಾಗಿ ಸಿಎಂ ಎಚ್ಚರಿಕೆ ನೀಡಿದ್ದರು. ತಮ್ಮ ಮಾತಿನಂತೆ ಈಗ ಯುಪಿ ಸರ್ಕಾರ ವಿಡಿಯೋ ತುಣುಕು, ಫೋಟೋ, ಸಿಸಿಟಿವಿಗಳ ಪರಿಶೀಲನೆ ಆರಂಭಿಸಿದ್ದು, ಇದರಲ್ಲಿ ಯಾರು ಸಾರ್ವಜನಿಕ ಆಸ್ತಿ ನಾಶ ಮಾಡಿದ್ದಾರೆ ಎಂದು ತಿಳಿದು ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಮುಂದಾಗಿದ್ದಾರೆ. ಇದಕ್ಕಾಗಿ ಸರ್ಕಾರ ನಾಲ್ವರು ಸದಸ್ಯರ ಸಮಿತಿ ರಚಿಸಿದ್ದು, ಪೂರ್ವ ಮತ್ತು ಪಶ್ಚಿಮ ಭಾಗದ ಹೆಚ್ಚುವರಿ ಜಿಲ್ಲಾಧಿಕಾರಿಯನ್ನು ಸಮಿತಿಗಳ ಮುಖ್ಯಸ್ಥರನ್ನಾಗಿ ನೇಮಿಸಲಾಗಿದ್ದು, ಈ ಭಾಗದಲ್ಲಿ ಆಗಿರುವ ನಷ್ಟ ಹಾಗೂ ಅದನ್ನು ವಸೂಲಿ ಮಾಡುವ ಜವಾಬ್ದಾರಿ ನೀಡಲಾಗಿದೆ.

ರಾಂಪುರ ಜಿಲ್ಲಾಡಳಿತ ಈಗಾಗಲೇ ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿ ನಷ್ಟಗೊಳಿಸಿದ 25 ಜನರನ್ನು ಗುರುತಿಸಿ ಅವರ ಆಸ್ತಿಯನ್ನು ವಶಕ್ಕೆ ಪಡೆಯಲಾಗಿದೆ ಎಂಬ ವರದಿ ಬಂದಿದೆ.

ಪ್ರತಿಭಟನೆ ಹೆಸರಲ್ಲಿ ನಡೆಯುವ ದಾಂದಲೇ, ಸಾರ್ವಜನಿಕ ಆಸ್ತಿ ಹಾನಿ ವಿರುದ್ಧ ಯೋಗಿ ಆದಿತ್ಯನಾಥ್ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ.

Leave a Reply