ಪೇಜಾವರ ಶ್ರೀಗಳು ವಿಧಿವಶ, ಶೋಕದಲ್ಲಿ ಭಕ್ತ ಸಾಗರ

ಡಿಜಿಟಲ್ ಕನ್ನಡ ಟೀಮ್:

ಉಡುಪಿಯ ಪೇಜಾವರ ಶ್ರೀಗಳು ಭಾನುವಾರ ಕೊನೆ ಉಸಿರೆಳೆದಿದ್ದಾರೆ.

88 ವರ್ಷದ ಶ್ರೀಗಳು ಆರೋಗ್ಯ ಸಮಸ್ಯೆಯಿಂದಾಗಿ ಕಳೆದ ಕೆಲವು ದಿನಗಳಿಂದ ಕಸ್ತೂರಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸದ ಕಾರಣ ಅವರ ಮೆದುಳು ನಿಷ್ಕ್ರಿಯಗೊಂಡಿತ್ತು. ಭಾನುವಾರ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟ ಪರಿಣಾಮ ಅಸ್ತಂಗತರಾದರು.

ಉಡುಪಿಯಲ್ಲಿ ಬಿಗಿ ಭದ್ರತೆ ನೀಡಲಾಗಿದ್ದು, ಮೂರು ದಿನಗಳ ಕಾಲ ಶೋಕಾಚಾರಣೆ ಮಾಡಲು ರಾಜ್ಯ ಸರ್ಕಾರ ಘೋಷಿಸಿದೆ. ಶ್ರೀಗಳ ಅಗಳಿಕೆಗೆ ಸಿಎಂ ಯಡಿಯೂರಪ್ಪ ಅವರು ಸಂತಾಪ ಸೂಚಿಸಿದ್ದು, ‘ಹಿಂದೂ ಧರ್ಮ ಓರ್ವ ಮಹಾನ್ ಸಂತನನ್ನು ಕಳೆದುಕೊಂಡಿದೆ. ಭಗವಾನ್ ಶ್ರೀಕೃಷ್ಣ ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಅಗಲಿಕೆ ನೋವನ್ನು ಭರಿಸುವ ಶಕ್ತಿಯನ್ನು ಪರಮಾತ್ಮ ಅವರ ಭಕ್ತ ಸಮೂಹಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದರು.

Leave a Reply