ನಿರ್ಭಯಾ ಅತ್ಯಾಚಾರ ಪ್ರಕರಣ: ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಡಿಜಿಟಲ್ ಕನ್ನಡ ಟೀಮ್:

ನಿರ್ಭಯಾ ಅತ್ಯಾಚಾರ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ದೆಹಲಿಯ ಕೋರ್ಟ್ ಆದೇಶ ಹೊರಡಿಸಿದೆ.

ಇದೇ ತಿಂಗಳು 22ರಂದು ಬೆಳಗ್ಗೆ 7 ಗಂಟೆಗೆ ಗಲ್ಲುಶಿಕ್ಷೆ ನೀಡಲು ಸಮಯ ನಿಗದಿಪಡಿಸಿದೆ.

2012ರ ದೆಹಲಿ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಸಂತ್ರಸ್ತೆ ತಾಯಿ ಆಶಾ ದೇವಿ ಅವರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಮಹತ್ವದ ಆದೇಶ ಹೊರಡಿಸಿದೆ. ಈ ತೀರ್ಪು ಕುರಿತು ಪ್ರತಿಕ್ರಿಯೆ ನೀಡಿರುವ ಸಂತ್ರಸ್ತೆ ತಾಯಿ, ‘ನನ್ನ ಮಗಳಿಗೆ ಈಗ ನ್ಯಾಯ ಸಿಕ್ಕಿದೆ. ಅಪರಾಧಿಗಳನ್ನು ಗಲ್ಲುಗೇರಿಸುವುದರಿಂದ ದೇಶದ ಮಹಿಳೆಯರಿಗೆ ಶಕ್ತಿ ಬರಲಿದೆ. ಈ ತೀರ್ಪು ನ್ಯಾಯಾಂಗ ವ್ಯವಸ್ಥೆ ಮೇಲಿನ ನಂಬಿಕೆ ಹೆಚ್ಚುವಂತೆ ಮಾಡಿದೆ ಎಂದಿದ್ದಾರೆ.

Leave a Reply