ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಯುಗಾಂತ್ಯ?

ಡಿಜಿಟಲ್ ಕನ್ನಡ ಟೀಮ್:

ಟೀಮ್ ಇಂಡಿಯಾದ ಶ್ರೇಷ್ಠ ನಾಯಕ ಹಾಗೂ ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನ್ ಅಂತ್ಯವಾಯಿತೇ ಎಂಬ ಪ್ರಶ್ನೆ ಉದ್ಭವಿಸಿದೆ.

ಕಾರಣ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಿಸಿಸಿಐ ಇಂದು ಪರಿಷ್ಕೃತ ಆಟಗಾರರ ಒಪ್ಪಂದ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಮಹೇಂದ್ರ ಸಿಂಗ್ ಧೋನಿ ಅವರ ಹೆಸರನ್ನು ಕೈಬಿಟ್ಟಿದೆ.

ಕಳೆದ ವರ್ಷ ಇಂಗ್ಲೆಂಡ್ ನಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದ ಬಳಿಕ ಧೋನಿ ಮತ್ತೆ ಅಂತಾರಾಷ್ಟ್ರೀಯ ಪಂದ್ಯ ಆಡಿಲ್ಲ.

ಇತ್ತೀಚೆಗೆ ಧೋನಿ ಕುರಿತಾಗಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ್ದ ಕೋಚ್ ರವಿಶಾಸ್ತ್ರಿ, ಐಪಿಎಲ್ ನಲ್ಲಿ ಧೋನಿ ಫಿಟ್ನೆಸ್ ನೋಡಿಕೊಂಡು ಅವರನ್ನು ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದರು.

Leave a Reply