ರಾಜ್ಯಕ್ಕೆ ಬಂದಿರೋ ಅಮಿತ್ ಶಾಗೆ ಸಿದ್ದರಾಮಯ್ಯ ಕೊಟ್ಟ ಸಲಹೆ ಏನು?

ಡಿಜಿಟಲ್ ಕನ್ನಡ ಟೀಮ್:

ಸಿಎಎ ಜನ ಜಾಗೃತಿ ಸಮಾವೇಶದಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅಮಿತ್ ಶಾಗೆ ಸಲಹೆ ನೀಡುವ ಮೂಲಕ ಸ್ವಾಗತಿಸಿದ್ದಾರೆ.

ಟ್ವಿಟರ್ ನಲ್ಲಿ ಅಮಿತ್ ಶಾ ಅವರಿಗೆ ಸಲಹೆ ಜತೆಗೆ ಕೆಲವು ಪ್ರಶ್ನೆಗಳನ್ನು ಕೇಳಿರುವ ಸಿದ್ದರಾಮಯ್ಯ, ‘ಗೃಹ ಸಚಿವ ಅಮಿತ್ ಶಾ ಅವರೇ, ಸಿಎಎ,ಎನ್‌ಆರ್‌ಸಿ ಮೂಲಕ ದೇಶ ಒಡೆಯುವ ಕೆಲಸಕ್ಕೆ ಸ್ವಲ್ಪ ವಿರಾಮ ನೀಡಿ, ನೆರೆಹಾವಳಿಯಿಂದ ಬದುಕು ಕಳೆದುಕೊಂಡು ಬೀದಿಗೆ ಬಿದ್ದಿರುವ ಸಂತ್ರಸ್ತರ ಕಡೆ‌ ಗಮನ‌ ಕೊಡಿ. ನೆರೆ ಹಾವಳಿ ನಷ್ಟಕ್ಕೆ ಪರಿಹಾರ ಕೇಳಿರುವುದು 25 ಸಾವಿರ ಸಾವಿರ ಕೋಟಿ ರೂಪಾಯಿ, ಕೇಂದ್ರ ಸರ್ಕಾರ ನೀಡಿರುವುದು 1800 ಕೋಟಿ ರೂಪಾಯಿ.‌‌ ಮೊದಲು ಬಾಕಿ ನೆರೆ‌ಪರಿಹಾರ ಪಾವತಿ ನಂತರ ಸಿಎಎ, ಎನ್ಆರ್ ಸಿ’ ಎಂದಿದ್ದಾರೆ.

ಇನ್ನು ನಾಳೆ ಹುಬ್ಬಳಿಯ ಸಮಾವೇಷದಲ್ಲಿ ಭಾಗವಹಿಸಲಿರುವ ಹಿನ್ನೆಯಲ್ಲಿ ಕಳಸಾಬಂಡೂರಿ ವಿಚಾರವಾಗಿ ಪ್ರಶ್ನೆಕೇಳಿರುವ ಸಿದ್ದರಾಮಯ್ಯ, ತಮ್ಮ ಪ್ರಶ್ನೆಗಳಿಗೆ ಉತ್ತರಿಸುವಂತೆ ಆಗ್ರಹಿಸಿದ್ದಾರೆ. ಸಿದ್ದರಾಯಮ್ಮ ಕೇಳಿರುವ ಪ್ರಶ್ನೆಗಳು ಹೀಗಿವೆ…

ಕಳಸಾ-ಬಂಡೂರಿ ಯೋಜನೆ‌ ಬಗ್ಗೆ ನಿಮ್ಮ ಪಕ್ಷ ಎರಡು ನಾಲಿಗೆಯಲ್ಲಿ ಯಾಕೆ ಮಾತನಾಡುತ್ತಿದೆ? ಚುನಾವಣೆಯ ಮೊದಲು ನಮ್ಮ ಪರ, ಈಗ ಗೋವಾ ಪರ. ಹುಬ್ಬಳ್ಳಿ ಸಭೆಯಲ್ಲಿ ಒಂದೇ ನಾಲಗೆಯಲ್ಲಿ ಸ್ಪಷ್ಟೀಕರಣ ಕೊಟ್ಟು ಬಿಡಿ.

Leave a Reply