ಬಾಂಬರ್ ಆದಿತ್ಯ ರಾವ್ ಅರೆಸ್ಟ್! ಅಜ್ಞಾತ ಸ್ಥಳದಲ್ಲಿ ವಿಚಾರಣೆ

ಡಿಜಿಟಲ್ ಕನ್ನಡ ಟೀಮ್:

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣದ ಪ್ರಮುಖ ಆರೋಪಿ ಆದಿತ್ಯ ರಾವ್ ಇಂದು ಪೊಲೀಸರ ಬಳಿ ಶರಣಾಗಿದ್ದಾನೆ. ಈತನನ್ನು ಬಂಧಿಸಿದ ಪೊಲೀಸರು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ಸೋಮವಾರ ಬೆಳಗ್ಗೆ 7 ರಿಂದ 8 ಗಂಟೆ ಸಂದರ್ಭದಲ್ಲಿ ವಿಮಾನ ನಿಲ್ದಾಣಕ್ಕೆ ಆಟೋ ಮೂಲಕ ವ್ಯಕ್ತಿಯೋರ್ವ ಬಂದಿದ್ದ . ಈ ವೇಳೆ ಬಾಂಬ್ ಇದ್ದ ಲ್ಯಾಪ್​ಟಾಪ್​ ಬ್ಯಾಗ್ ಅನ್ನು ವಿಮಾನ ನಿಲ್ದಾಣದಲ್ಲೇ ಬಿಟ್ಟು ಹೋಗಿದ್ದ. ಆದರೆ, ಈ ಬ್ಯಾಗ್​ನಲ್ಲಿ ಸಜೀವ ಬಾಂಬ್ ಇರುವುದು ನಂತರ ಪತ್ತೆಯಾಗಿದೆ.

ಈತ ಮೂಲತಃ ಮೆಕಾನಿಕಲ್ ಇಂಜಿನಿಯರ್ ಪದವೀಧರನಾಗಿದ್ದು, ಕಳೆದ ಒಂದು ವರ್ಷದಿಂದ ಇಂಟರ್ ನೆಟ್ ಬಾಂಬ್ ತಯಾರಿಸುವ ಮಾಹಿತಿ ಪಡೆದು ತಯಾರಿ ನಡೆಸಿದ್ದ ಎಂದು ವರದಿಗಳು ಬಂದಿವೆ.

ಇಂದು ಬೆಂಗಳೂರು ಡಿಜಿ ಕಚೇರಿಗೆ ಹೋಗಿ ನಾನೇ ಆದಿತ್ಯರಾವ್ ಅಂತ ಹೇಳಿಕೊಂಡಾಗ ತಕ್ಷಣ ಹೊಯ್ಸಳ ವಾಹನದಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಗೆ ಈತನನ್ನು ಕರೆತರಲಾಗಿತ್ತು. ಠಾಣೆಗೆ ಬಂದ ಇನ್ಸ್​ಪೆಕ್ಟರ್ ಹರಿವರ್ಧನ್, ಆದಿತ್ಯರಾವ್ ವಿಚಾರಣೆ ನಡೆಸುತ್ತಿರುವುದಾಗಿ ಮಾಹಿತಿ ಬಂದಿದೆ.

Leave a Reply