ಕ್ಷಮೆ ಕೇಳಲ್ಲ..! ಹೈಕಮಾಂಡ್ ಗೂ ಅನಂತಕುಮಾರ್ ಹೆಗಡೆ ಡೋಂಟ್ ಕೇರ್!

ಡಿಜಿಟಲ್ ಕನ್ನಡ ಟೀಮ್:

‘ನಾನು ಮಹಾತ್ಮ ಗಾಂಧಿ ಕುರಿತು ಹೇಳಿಕೆ ನೀಡಿಲ್ಲ. ಆದರೆ ನಮ್ಮ ಸ್ವಾತಂತ್ರ್ಯ ಹೋರಾಟದ ನೈಜ ಪರಿಸ್ಥಿತಿ ವಿವರಿಸಿದ್ದೆ. ನನ್ನ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದು, ಕ್ಷಮೆ ಕೇಳುವ ಅಗತ್ಯವಿಲ್ಲ…’ ಇದು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಅವರು ತಮ್ಮ ಹೇಳಿಕೆ ಸಮರ್ಥಿಸಿಕೊಂಡಿರುವ ಪರಿ.

ತಮ್ಮ ವಿವಾದಾತ್ಮಕ ಹೇಳಿಕೆಗೆ ಸ್ಪಷ್ಟನೆ ನೀಡುವಂತೆ ಅನಂತಕುಮಾರ್ ಹೆಗಡೆ ಅವರಿಗೆ ಪಕ್ಷದ ಹೈಕಮಾಂಡ್ ನೋಟೀಸ್ ಜಾರಿ ಮಾಡಿತ್ತು. ಆದರೆ ಈಗ ಕ್ಷಮೆ ಕೇಳ್ಳುವುದಿಲ್ಲ ಎಂದು ತಮ್ಮ ನಿಲುವಿಗೆ ಪಟ್ಟು ಹಿಡಿದು ಹೈಕಮಾಂಡ್ ನಾಯಕರ ಸೂಚನೆಗೆ ಗೋಲಿ ಹೊಡೆದಿದ್ದಾರೆ.

ಎಎನ್ಐ ಸುದ್ದಿಸಂಸ್ಥೆಗೆ ನೀಡಿರುವ ಹೇಳಿಕೆಯಲ್ಲಿ, ‘ನಾನು ಸಾರ್ವಜನಿಕ ವೇದಿಕೆಯಲ್ಲಿ ಮಾತನಾಡಿದ್ದು, ನನ್ನ ಭಾಷಣ ಎಲ್ಲರಿಗೂ ಲಭ್ಯವಿದೆ. ನಾನು ಮಹಾತ್ಮ ಗಾಂಧೀಜಿ ಅಥವಾ ಪಂಡಿತ್ ಜವಾಹರಲಾಲ್ ನೆಹರು ಅವರ ಕುರಿತು ಕೇಳಿಕೆ ನೀಡಿಲ್ಲ. ನಾನು ಕೇವಲ ನಮ್ಮ ಸ್ವಾತಂತ್ರ್ಯ ಹೋರಾಟದ ಬಗ್ಗೆ ಹೇಳಿದ್ದೇನೆ. ಹೈಕಮಾಂಡ್ ನೀಡಿರುವ ನೋಟಿಸಿಗೆ ಉತ್ತರ ನೀಡಿದ್ದೇನೆ. ಮುಂದಿನದನ್ನು ಹೈಕಮಾಂಡ್ ನಿರ್ಧರಿಸಲಿ. ನಾನು ನನ್ನ ಹೇಳಿಕೆಗೆ ಬದ್ದವಾಗಿರುತ್ತೇನೆ’ ಎಂದು ಹೇಳಿದ್ದಾರೆ.

ಈ ಮಧ್ಯೆ ಪ್ರಕರಣವನ್ನು ಪಕ್ಷದ ಶಿಸ್ತು ಸಮಿತಿಗೆ ವರ್ಗಾಹಿಸಿದ್ದು, ಸಮಿತಿ ಅನಂತಕುಮಾರ್ ಹೆಗಡೆ ಅವರ ಕುರಿತು ಯಾವ ಕ್ರಮ ಜರುಗಿಸಬೇಕು ಎಂಬುದನ್ನು ನಿರ್ಧರಿಸಿದೆ ಎಂದು ಬಿಜೆಪಿ ಮೂಲಗಳು ತಿಳಿಸಿರುವುದಾಗಿ ಎಎನ್ಐ ಟ್ವೀಟ್ ಮಾಡಿದೆ.

Leave a Reply