ರಾಮ ಮಂದಿರ ನಿರ್ಮಾಣಕ್ಕೆ ಟ್ರಸ್ಟ್ ಸ್ಥಾಪನೆ!

ಡಿಜಿಟಲ್ ಕನ್ನಡ ಟೀಮ್:

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ‘ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್’ ಅನ್ನು ಸ್ಥಾಪಿಸಿದೆ.

ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು ಎಂದು ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭೆಯಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು…

ವಿವಾದಿತ ರಾಮ ಜನ್ಮಭೂಮಿಯಲ್ಲಿ ಸಂಪೂರ್ಣ ಅಧಿಕಾರ ರಾಮಲಲ್ಲಾಗೆ ಸಲ್ಲಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶ ಮೇರೆಗೆ, ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಸ್ವಾಯತ್ತ ಟ್ರಸ್ಟ್ ಸ್ಥಾಪಿಸಲಾಗಿದೆ.

ವಿವಾದಿತ ಭೂಮಿ ಜತೆಗೆ ಸರ್ಕಾರ ಒಟ್ಟು 67 ಎಕರೆ ಜಮೀನನ್ನು ರಾಮ ಮಂದಿರ ನಿರ್ಮಾಣಕ್ಕೆ ಹಸ್ತಾಂತರಿಸಲು ತೀರ್ಮಾನಿಸಲಾಗಿದೆ. ಮಂದಿರ ನಿರ್ಮಾಣ ಹಾಗೂ ಇದಕ್ಕೆ ಸಂಬಂಧಿಸಿದ ಎಲ್ಲ ನಿರ್ಧಾರ ಕೈಗೊಳ್ಳಲು ಈ ಟ್ರಸ್ಟ್ ಸಂಪೂರ್ಣ ಸ್ವತಂತ್ರ ಹೊಂದಿದೆ.

ಇನ್ನು ಕೋರ್ಟ್ ಆದೇಶದಂತೆ ಸುನ್ನಿ ವಕ್ಫ್ ಮಂಡಳಿಗೆ 5 ಎಕರೆ ಜಮೀನು ನೀಡಲು ಉತ್ತರ ಪ್ರದೇಶ ಸರ್ಕಾರ ಸಮ್ಮತಿ ಸೂಚಿಸಿದೆ.

ಭಾರತದಲ್ಲಿ ಹಿಂದೂ, ಮುಸ್ಲಿಂ, ಸಿಖ್, ಬೌದ್ಧ, ಪಾರ್ಸಿ, ಜೈನ್ ಸೇರಿದಂತೆ ಎಲ್ಲ ಧರ್ಮದವರು ಒಂದು ಕುಟುಂಬದ ಸದಸ್ಯರಂತೆ ಇರಬೇಕು. ನಮ್ಮ ಸರ್ಕಾರ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಧ್ಯೇಯದೊಂದಿಗೆ ಕಾರ್ಯ ನಿರ್ವಹಿಸುತ್ತದೆ.

Leave a Reply