ಡಿಬಾಸ್ ಹುಟ್ಟುಹಬ್ಬಕ್ಕೆ ‘ರಾಬರ್ಟ್’ನ ಝಲಕ್!

ಡಿಜಿಟಲ್ ಕನ್ನಡ ಟೀಮ್:

ತಮ್ಮ ನೆಚ್ಚಿನ ಡಿ ಬಾಸ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಕೌಂಟ್ಡೌನ್ ಶುರು ಮಾಡಿದ್ದಾರೆ. ಇದೇ 16ರಂದು ಚಾಲೆಂಜಿಂಗ್ ಸ್ಟಾರ್ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳಿಗೆ ಪ್ರತಿಯಾಗಿ ಉಡುಗೊರೆ ರೂಪದಲ್ಲಿ ಬಹು ನಿರೀಕ್ಷಿತ ರಾಬರ್ಟ್ ಚಿತ್ರದ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.

ಈ ಬಗ್ಗೆ ಚಿತ್ರದ ನಿರ್ದೇಶಕ ತರುಣ್ ಸುಧೀರ್, ಫೆ.16ರ ಮಧ್ಯರಾತ್ರಿ ಡಿ ಬಾಸ್ ದರ್ಶನ್ ಅವರ ಹುಟ್ಟುಹಬ್ಬದ ಸಲುವಾಗಿ ರಾಬರ್ಟ್ ಚಿತ್ರದ ಟೀಸರ್ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ರಾಬರ್ಟ್ ಚಿತ್ರ ಈಗಾಗಲೇ 100 ದಿನ ಚಿತ್ರೀಕರಣ ಪೂರ್ಣಗೊಳಿಸಿದ್ದು, ದರ್ಶನ್ ಅವರು ರಾಜವೀರ ಮದಕರಿ ನಾಯಕ ಚಿತ್ರದ ಚಿತ್ರೀಕರಣಕ್ಕಾಗಿ ಕೇರಳದಲ್ಲಿದ್ದು, ಹುಟ್ಟುಹಬ್ಬದ ವೇಳೆಗೆ ಬೆಂಗಳೂರಿಗೆ ಮರಳಲಿದ್ದಾರೆ.

Leave a Reply