ವೀರಯೋಧ ಗುರು ಸ್ಮಾರಕಕ್ಕೆ 25 ಲಕ್ಷ ಅನುದಾನ ಬಿಡುಗಡೆ

ಡಿಜಿಟಲ್ ಕನ್ನಡ ಟೀಮ್:

ಕಳೆದ ವರ್ಷ ನಡೆದ ಪುಲ್ವಾಮಾ ಉಗ್ರ ದಾಳಿಯಲ್ಲಿ ಹುತಾತ್ಮರಾದ ಮದ್ದೂರು ತಾಲ್ಲೂಕು ಮೂಲದ ಸಿಆರ್ ಪಿಎಫ್ ಯೋಧ ಹೆಚ್.ಗುರು ಅವರ ಸ್ಮಾರಕ ನಿರ್ಮಾಣಕ್ಕೆ ಆದೇಶಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು 25 ಲಕ್ಷ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದ್ದಾರೆ.

ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಗುರು ಸ್ಮಾರಕ ನಿರ್ಮಾಣವಾಗದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರು. ಅಲ್ಲದೆ ಈ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು.

ಈಗ ಈ ವಿಚಾರವಾಗಿ ಆದೇಶ ಹೊರಡಿಸಿರುವ ಮುಖ್ಯಮಂತ್ರಿಗಳು ಹೆಚ್.ಗುರು ಅವರ ತ್ಯಾಗ ಬಲಿದಾನ ಮುಂದಿನ ಪೀಳಿಗೆಗೆ ಆದರ್ಶವಾಗಬೇಕು. ಹೀಗಾಗಿ ಅವರ ಸ್ಮಾರಕ ನಿರ್ಮಿಸುವುದು ಅಗತ್ಯವಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದು, ಮಂಡ್ಯ ಜಿಲ್ಲಾಧಿಕಾರಿಗಳಿಗೆ 25 ಲಕ್ಷ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದ್ದಾರೆ.

Leave a Reply