ದೆಹಲಿ ಗಲಭೆ: ಪೊಲೀಸರನ್ನು ತರಾಟೆ ತೆಗೆದುಕೊಂಡ ಜಡ್ಜ್ ರಾತ್ರೋರಾತ್ರಿ ವರ್ಗಾವಣೆ!

ಡಿಜಿಟಲ್ ಕನ್ನಡ ಟೀಮ್:

ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ಗಲಭೆ ಕುರಿತು ನಿನ್ನೆ ದೆಹಲಿ ಹೈ ಕೋರ್ಟ್ ಜಡ್ಜ್ ನ್ಯಾಯಮೂರ್ತಿ ಎಸ್ ಮುರಳೀಧರ್ ಪೊಲೀಸರ ಕಾರ್ಯವೈಖರಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಪೊಲೀಸರನ್ನು ಪ್ರಶ್ನಿಸಿದ್ದಕ್ಕೆ ಕೇಂದ್ರ ಸರ್ಕಾರ ರಾತ್ರೋರಾತ್ರಿ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಿ ಅಧಿಸೂಚನೆ ಹೊರಡಿಸಿದೆ.

ದೆಹಲಿ ಗಲಭೆಯಲ್ಲಿ ಈವರೆಗೂ 28 ಮಂದಿ ಮೃತಪಟ್ಟಿದ್ದಾರೆ. ಫೆ.12ರಂದು ಸುಪ್ರೀಂ ಕೋರ್ಟ್ ಕೊಲೊಗಿಯಮ್ ವರ್ಗಾವಣೆಗೆ ಶಿಫಾರಸ್ಸು ಮಾಡಿತ್ತು. ಈ ಶಿಫಾರಸ್ಸು ವಿರೋಧಿಸಿ ದೆಹಲಿ ಬಾರ್ ಕೌನ್ಸಿಲ್ ಈ ನಿರ್ಧಾರ ಹಿಂಪಡೆಯಲು ಆಗ್ರಹಿಸಿತ್ತು. ಆದರೆ ನಿನ್ನೆ ನ್ಯಾಯಮೂರ್ತಿ ಮುರಳೀಧರ್ ಅವರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ರಾತ್ರಿ 11 ಗಂಟೆಗೆ ವರ್ಗಾವಣೆ ಆದೇಶ ಹೊರಡಿಸಿದೆ. ಮುರಳೀಧರ್ ಅವರನ್ನು ಪಂಜಾಬ್ ಹಾಗೂ ಹರಿಯಾಣ ಹೈಕೋರ್ಟ್ ಗೆ ವರ್ಗಾಯಿಸಿದೆ.

Leave a Reply