ಅರ್ಜುನ್ ಜನ್ಯಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

ಡಿಜಿಟಲ್ ಕನ್ನಡ ಟೀಮ್:

ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಹೃದಯಾಘಾತವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೈಸೂರಿನ ತಮ್ಮ ನಿವಾಸದಲ್ಲಿರುವಾಗ ಅರ್ಜುನ್ ಜನ್ಯಗೆ ಹೃದಯಾಘಾತವಾಗಿದ್ದು, ತಕ್ಷಣ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗಿದೆ.

ಜನ್ಯ ಅವರಿಗೆ ತೀವ್ರ ಹೃದಯಾಘಾತವಾಗಿದೆ. ಸ್ವಲ್ಪ ತಡವಾಗಿದ್ದರೂ ಅವರಿಗೆ ಹೆಚ್ಚಿನ ತೊಂದರೆಯಾಗುತ್ತಿತ್ತು ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ತಡರಾತ್ರಿಯೇ ಅರ್ಜುನ್ ಜನ್ಯ ಅವರನ್ನು ಐಸಿಯೂ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply