ದೇಶಕ್ಕೆ ಬಂದಿರೋ ಎಲ್ಲ ನಿರಾಶ್ರಿತರಿಗೆ ಪೌರತ್ವ: ಅಮಿತ್ ಶಾ

ಡಿಜಿಟಲ್ ಕನ್ನಡ ಟೀಮ್:

ಭಾರತಕ್ಕೆ ವಲಸೆ ಬಂದಿರುವ ಎಲ್ಲ ನಿರಾಶ್ರಿತರಿಗೆ ಸಿಎಎ ಮೂಲಕ ಪೌರತ್ವ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಕೋಲ್ಕತ್ತಾದ ಶಾಹಿದ್ ಮಿನಾರ್ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ‘ಟಿಎಂಸಿ ಸೇರಿದಂತೆ ವಿರೋಧ ಪಕ್ಷಗಳು ವಲಸಿಗರು ಹಾಗೂ ಅಲ್ಪಸಂಖ್ಯಾತರಲ್ಲಿ ಹಾದಿ ತಪ್ಪಿಸುತ್ತಿವೆ ಮತ್ತು ಅವರಲ್ಲಿ ಹೆದರಿಕೆ ಹುಟ್ಟಿಸುತ್ತಿವೆ. ಯಾವುದೇ ಕಾರಣಕ್ಕೂ ಮಮತಾ ಬ್ಯಾನರ್ಜಿ ಅವರು ಸಿಎಎ ಜಾರಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ’ ಎಂದು ಸವಾಲು ಎಸೆದರು.

‘ಸಿಎಎ ಪೌರತ್ವ ನೀಡುತ್ತದೆಯೆ ಹೊರತು ಕಸಿದುಕೊಳ್ಳುವುದಿಲ್ಲ ಎಂದು ಅಲ್ಪಸಂಖ್ಯಾತ ಸಮುದಾಯದ ಪ್ರತಿಯೊಬ್ಬರಿಗೂ ನಾನು ಭರವಸೆ ನೀಡುತ್ತೇನೆ. ದೇಶಕ್ಕೆ ಬಂದಿರುವ ಪ್ರತಿಯೊಬ್ಬ ನಿರಾಶ್ರಿತರಿಗೆ ಪೌರತ್ವ ಸಿಗುವವರೆಗೂ ಸಿಎಎಯನ್ನು ನಿಲ್ಲಿಸಲು ಸಾಧ್ಯವಿಲ್ಲ’ ಎಂದರು.

ಮುಂದಿನ ವರ್ಷ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ರಣ ಕಹಳೆ ಮೊಳಗಿಸಿದ ಅಮಿತ್ ಶಾ, ‘ಮುಂಬರುವ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿ ಬಹುಮತದೊಂದಿಗೆ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Leave a Reply