ಡಿಜಿಟಲ್ ಕನ್ನಡ ಟೀಮ್:
ಇತ್ತೀಚೆಗೆ ದುಬೈ ಹಾಗೂ ಇಟಲಿಯಿಂದ ಭಾರತಕ್ಕೆ ಮರಳಿದ್ದ ಇಬ್ಬರು ವ್ಯಕ್ತಿಗಳಿಗೆ ಕೊರೋನಾ ವೈರಸ್ ಸೋಂಕು ತಗುಲಿರುವುದು ಧೃಡಪಟ್ಟಿದೆ.
ತೆಲಂಗಾಣ ಹಾಗೂ ದೆಹಲಿಯಲ್ಲಿ ಈ ಪ್ರಕರಣ ಪತ್ತೆಯಾಗಿದ್ದು, ಇವರ ಆರೋಗ್ಯ ಸ್ಥಿರವಾಗಿದ್ದು ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ದೆಹಲಿಯಲ್ಲಿ ಸೋಂಕು ಪತ್ತೆಯಾಗಿರುವ ವ್ಯಕ್ತಿ ಅವರು ಇಟಲಿಯಿಂದ ವಾಪಸ್ಸಾಗಿದ್ದರು. ಇನ್ನು ತೆಲಂಗಾಣದಲ್ಲಿ ಸೋಂಕು ಪತ್ತೆಯಾಗಿರುವ ವ್ಯಕ್ತಿ ದುಬೈನಿಂದ ವಾಪಸ್ಸಾಗಿದ್ದರು ಎಂದು ಮಾಹಿತಿ ಬಂದಿದೆ.