ಭಾರತದಲ್ಲಿ ಮತ್ತೊಂದು ಕೊರೋನಾ ಸೋಂಕು ಪತ್ತೆ! 24 ಜನರಿಗೆ ದಿಗ್ಬಂಧನ!

ಡಿಜಿಟಲ್ ಕನ್ನಡ ಟೀಮ್:

ನಿನ್ನೆ ತೆಲಂಗಾಣ ಹಾಗೂ ದೆಹಲಿಯಲ್ಲಿ ಕೊರೋನಾ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಇಂದು ಜೈಪುರದಲ್ಲಿ ಇಟಲಿ ಪ್ರವಾಸಿಗನಿಗೆ ಕೊರೋನಾ ಸೋಂಕು ಪತ್ತೆಯಾಗಿದೆ.

ಈ ಪ್ರವಾಸಿಗನನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ಈತನ ಜತೆ ಬಂದಿದ್ದ ಇತರೆ 21 ಇಟಲಿ ಪ್ರವಾಸಿಗರು ಹಾಗೂ 3 ಭಾರತೀಯರನ್ನು ಬೇರೆಯವರಿಂದ ದೂರವಿದಲಾಗಿದ್ದು ಪರೀಕ್ಷೆಗೆ ಒಳಪಡಿಸಲಾಗಿದೆ.

ಇದರೊಂದಿಗೆ ಭಾರತದಲ್ಲಿ ಕೊರೋನಾ ವೈರಸ್ ಸೋಂಕು ಪ್ರಕರಣ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

Leave a Reply