ಭಾರತದಲ್ಲಿ ಹೆಚ್ಚಿದ ಕೊರೋನಾ ಕಾಟ! 28 ಮಂದಿಗೆ ಸೋಂಕು!

ಡಿಜಿಟಲ್ ಕನ್ನಡ ಟೀಮ್:

ಕಳೆದ ಮೂರು ದಿನಗಳಲ್ಲಿ ಭಾರತದಲ್ಲಿ ಕೊರೋನಾ ವೈರಸ್ ಸೋಂಕಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ಅವರು ದೇಶದಲ್ಲಿ 28 ಮಂದಿಗೆ ಸೋಂಕು ತಗುಲಿದೆ ಎಂದು ಮಾಹಿತಿ ನೀಡಿದ್ದಾರೆ.

ಸದ್ಯ ಇಲಾಖೆ ಮಾಹಿತಿ ಪ್ರಕಾರ ಸೋಂಕಿತರ ಪೈಕಿ 14 ಮಂದಿ ವಿದೇಶಿ ಪ್ರವಾಸಿಗರಾಗಿದ್ದಾರೆ. ಇನ್ನು ಕೇರಳದಲ್ಲಿ ಪತ್ತೆಯಾಗಿದ್ದ 3 ಸೋಂಕಿತರು ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಇಷ್ಟು ದಿನ ಸೋಂಕು ಪೀಡಿತ 12 ರಾಷ್ಟ್ರಗಳಿಂದ ಭಾರತಕ್ಕೆ ಆಗಮಿಸುತ್ತಿದ್ದ ವಿದೇಶಿಗರನ್ನು ಮಾತ್ರ ಪರೀಕ್ಷಿಸಲಾಗುತ್ತಿತ್ತು. ಆದರೆ, ದೇಶದಲ್ಲಿ ಸೋಂಕು ಪ್ರಮಾಣ ಹೆಚ್ಚುತ್ತಿದಂತೆ ವಿದೇಶದಿಂದ ಬರುವ ಪ್ರತಿಯೊಬ್ಬರನ್ನೂ ತಪಾಸಣೆಗೆ ಒಳಪಡಿಸಲಾಗುವುದು ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.

ಇನ್ನು ಸೋಂಕು ಪರೀಕ್ಷೆಗೆ ಇರುವ 34 ಪ್ರಯೋಗಾಲಯಗಳ ಸಂಖ್ಯೆಯನ್ನು 50ಕ್ಕೆ ಏರಿಕೆ ಮಾಡಲಾಗುತ್ತವೆ. ಸೋಂಕು ಪೀಡಿತ ಇರಾನ್ ನಲ್ಲಿ ಭಾರತ ಒಂದು ಪ್ರಯೋಗಾಲಯ ನಿರ್ಮಾಣ ಮಾಡಿ ಅಲ್ಲಿರುವ ಭಾರತೀಯರನ್ನು ಅಲ್ಲೇ ಪರೀಕ್ಷೆಗೆ ಒಳಪಡಿಸಿದ ನಂತರ ಭಾರತಕ್ಕೆ ವಾಪಸ್ ಕರೆ ತರಲಾಗುವುದು ಎಂದಿದ್ದಾರೆ.

Leave a Reply