ಐಸಿಸಿ ಮಹಿಳಾ ಶ್ರೇಯಾಂಕದಲ್ಲಿ ನಂ.1 ಆದ 16 ವರ್ಷದ ಶಫಾಲಿ ವರ್ಮಾ!

ಡಿಜಿಟಲ್ ಕನ್ನಡ ಟೀಮ್:

ಶಫಾಲಿ ವರ್ಮಾ… ಸದ್ಯ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ನ ಹೊಸ ಸ್ಟಾರ್!

ಕೇವಲ 16ನೆ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ ಶಫಾಲಿ ಕೇವಲ ಐದು ತಿಂಗಳಲ್ಲೇ ತನ್ನ ಅಮೋಘ ಪ್ರದರ್ಶನದಿಂದ ಐಸಿಸಿ ಮಹಿಳಾ ಟಿ20 ಬ್ಯಾಟರ್ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದ್ದಾರೆ.

ಇದರೊಂದಿಗೆ ಮಾಜಿ ನಾಯಕಿ ಮಿಥಾಲಿ ರಾಜ್ ನಂತರ ಈ ಸಾಧನೆ ಮಾಡಿದ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಸದ್ಯ ನಡೆಯುತ್ತಿರುವ ಟಿ20 ವಿಶ್ವಕಪ್ ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಶಫಾಲಿ ಭಾರತದ ಪ್ರಮುಖ ಆಟಗಾರ್ತಿಯಾಗಿದ್ದಾರೆ. ಈಕೆಯ ಸಾಧನೆ ಇತರರಿಗೂ ಸ್ಫೂರ್ತಿಯಾಗಿದೆ.

Leave a Reply