ಹೊರೆಯಾಗಲಿದೆ ಪೆಟ್ರೋಲ್, ಡೀಸೆಲ್, ಮದ್ಯ!

ಡಿಜಿಟಲ್ ಕನ್ನಡ ಟೀಮ್:

ನಿರೀಕ್ಷೆಯಂತೆ ಸಿಎಂ ಯಡಿಯೂರಪ್ಪ ಅವರು ತಮ್ಮ ಬಜೆಟ್ ನಲ್ಲಿ ಅಬಕಾರಿ ಸುಂಕ, ಪೆಟ್ರೋಲ್, ಡಿಸೇಲ್ ಮೇಲಿನ ಸುಂಕವನ್ನು ಹೆಚ್ಚಿಸಲಾಗಿದೆ.

ಆರ್ಥಿಕ ಸಂಕಷ್ಟ ಹಾಗೂ ಕೇಂದ್ರದಿಂದ ಬರಬೇಕಾಗಿದ್ದ ತೆರಿಗೆ ಪಾಲಿನಲ್ಲಿ ಭಾರಿ ಪ್ರಮಾಣದ ಇಳಿಕೆಯಾಗಿರುವುದರಿಂದ ರಾಜ್ಯ ಸರ್ಕಾರದ ಮೇಲೆ ಆರ್ಥಿಕ ಒತ್ತಡ ಹೆಚ್ಚಾಗಿದೆ. ಹೀಗಾಗಿ ಈ ವಸ್ತುಗಳ ಮೇಲಿನ ಸುಂಕ ದರವನ್ನು ಸರ್ಕಾರ ಹೆಚ್ಚಿಸಿದೆ.

2020-21ನೇ ಸಾಲಿನಲ್ಲಿ ಮದ್ಯದ ಎಲ್ಲಾ 18 ಘೋಷಿತ ಬೆಲೆ ಸ್ಲ್ಯಾಬ್ ಗಳ ಮೇಲೆ ಅಬಕಾರಿ ಸುಂಕವನ್ನು ಶೇ.6ರಷ್ಟು ಹೆಚ್ಚಳ ಮಾಡಲಾಗಿದೆ. ಇದರಿಂದ ಮುಂದಿನ ಆರ್ಥಿಕ ವರ್ಷದಲ್ಲಿ 22,700 ಕೋಟಿ ರೂ. ರಾಜಸ್ವ ಸಂಗ್ರಹಣೆ ಗುರಿ ಇಟ್ಟುಕೊಳ್ಳಲಾಗಿದೆ.

ಪೆಟ್ರೋಲ್ ಬೆಲೆಯಲ್ಲಿ 1.60 ರೂ. ಮತ್ತು ಡೀಸೆಲ್ ಬೆಲೆಯಲ್ಲಿ 1.59 ರೂ ಏರಿಕೆ ಮಾಡಲಾಗಿದೆ.

ಉಳಿದಂತೆ, ಸಾರಿಗೆ ಇಲಾಖೆಯಿಂದ 7100 ಕೋಟಿ ರಾಜಸ್ವ ಸಂಗ್ರಹಣೆ ಗುರಿ ಹೊಂದಲಾಗಿದೆ. 2020-21ನೇ ಸಾಲಿನಿಂದ 12ಕ್ಕಿಂತ 20 ಆಸನವರೆಗೂ ಹೆಚ್ಚು ಪ್ರಯಾಣಿಕರನ್ನು ಕೊಂಡೆಯ್ಯುವ ವಾಹನಗಳ ಮೇಲೆ ಮೋಟಾರು ವಾಹನ ತೆರಿಗೆಯಲ್ಲಿ ತ್ರೈಮಾಸಿಕ ಪ್ರತಿ ಆಸನಕ್ಕೆ 900 ರೂ. ನಿಗದಿ.

ಸ್ಲೀಪರ್ ಕೋಚ್ ವಾಹನಗಳ ನೋಂದಣಿ ಸಮಯದಲ್ಲಿ ತ್ರೈಮಾಸಿಕ ತೆರಿಗೆಯನ್ನು ಪ್ರತಿ ಸ್ಲೀಪರ್ಗೆ 4 ಸಾವಿರ ಸಂಗ್ರಹಿಸಲು ನಿರ್ಧಾರ.

Leave a Reply