ಡಿಜಿಟಲ್ ಕನ್ನಡ ಟೀಮ್:
ಕೊರೋನಾ ಸೋಂಕು ರಾಜ್ಯಕ್ಕೂ ಕಾಲಿಟ್ಟಿದೆ. ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬನಿಗೆ ಸೋಂಕು ತಗುಲಿರುವುದು ಪರೀಕ್ಷೆ ಮೂಲಕ ಧೃಡಪಟ್ಟಿದೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಈ ವ್ಯಕ್ತಿ ಇತ್ತೀಚೆಗೆ ಅಮೆರಿಕದಿಂದ ಭಾರತಕ್ಕೆ ಮರಳಿದ್ದ ಎಂಬುದು ತಿಳಿದು ಬಂದಿದೆ. ಈತನಿಗೆ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಮಧ್ಯೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಟ್ವೀಟ್ ಮಾಡಿದ್ದು, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.