ಕೊರೋನಾ ಪ್ರಕರಣ 43ಕ್ಕೆ ಏರಿಕೆ; ಷೇರು ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ!

ಡಿಜಿಟಲ್ ಕನ್ನಡ ಟೀಮ್:

ದೇಶದಲ್ಲಿ ಕೊರೋನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದ್ದು, ಜಮ್ಮು, ದೆಹಲಿ ಹಾಗೂ ಉತ್ತರ ಪ್ರದೇಶದಲ್ಲಿ ಹೊಸ ಪ್ರಕರಣ ದಾಖಲಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ 43ಕ್ಕೆ ಏರಿಕೆ.

ಕೊರೋನಾ ಪ್ರಕರಣಗಳ ಹೆಚ್ಚಳ ಹಾಗೂ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಬೆಲೆ ಕುಸಿತದ ಪರಿಣಾಮದಿಂದಾಗಿ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತವಾಗಿದೆ.

ಸನ್ಸೆಕ್ಸ್ 2100 ಅಂಕಗಳಷ್ಟು ಕುಸಿತ ಕಂಡರೆ, ನಿಫ್ಟಿ 500 ಅಂಕಗಳಷ್ಟು ಕುಸಿತ ಕಂಡಿದೆ.

Leave a Reply