ಕೊರೋನಾ ಎಫೆಕ್ಟ್; ಐಪಿಎಲ್ ಮುಂದಕ್ಕೆ?

ಡಿಜಿಟಲ್ ಕನ್ನಡ ಟೀಮ್:

ದೇಶದಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಐಪಿಎಲ್ ನಡೆಯುತ್ತಾ ಎಂಬ ಅನುಮಾನ ಮೂಡಿದ್ದವು. ಈಗ ಬಿಸಿಸಿಐ ಮೂಲಗಳ ಪ್ರಕಾರ ಪರಿಸ್ಥಿತಿ ನಿಯಂತ್ರಣವಾಗದಿದ್ದರೆ ಟೂರ್ನಿಯನ್ನು ಮುಂದೂಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಈ ಕುರಿತು ಎಎನ್ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದ್ದು, ಐಪಿಎಲ್ ಗೆ ಇನ್ನು ಸಮಯಾವಕಾಶ ಇದೆ. ಮಂಡಳಿ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸಧ್ಯಕ್ಕೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಮೂಲಗಳು ಹೇಳಿರುವುದಾಗಿ ತಿಳಿಸಿದೆ.

ಸದ್ಯದ ವೇಳಾಪಟ್ಟಿ ಪ್ರಕಾರ ಇದೇ 29ರಿಂದ ಐಪಿಎಲ್ ಆರಂಭವಾಗಲಿದ್ದು, ಮುಂಬೈ ಮತ್ತು ಚೆನ್ನೈ ತಂಡಗಳು ಮೊದಲ ಪಂದ್ಯದಲ್ಲಿ ಸೆಣೆಸಲಿವೆ.

ಕಳೆದ ಒಂದು ವಾರದಲ್ಲಿ ಸೋಂಕು ಪ್ರಕರಣ ಹೆಚ್ಚಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಆತಂಕ ಹೆಚ್ಚಿದೆ. ಅಲ್ಲದೆ ಹೆಚ್ಚಿನ ಜನದಟ್ಟಣೆಯಿಂದ ದೂರವಿರುವಂತೆ ಮುನ್ನೆಚ್ಚರಿಕೆ ಸೂಚನೆ ನೀಡಲಾಗಿದೆ. ಐಪಿಎಲ್ ಕ್ರಿಕೆಟ್ ಹಬ್ಬವಾಗಿದ್ದು, ಪ್ರತಿ ಪಂದ್ಯಕ್ಕೆ ಸಾವಿರಾರು ಜನ ಕ್ರೀಡಾಂಗಣದಲ್ಲಿ ಸೇರುತ್ತಾರೆ. ಹೀಗಾಗಿ ಪರಿಸ್ಥಿತಿ ಹೇಗೆ ಚೇತರಿಸಿಕೊಳ್ಳಲಿದೆ ಎಂಬುದರ ಮೇಲೆ ಐಪಿಎಲ್ ನಡೆಯುತ್ತದೆಯೇ ಅಥವಾ ಮುಂದೂಡಲಾಗುವುದೇ ಎಂಬುದು ನಿರ್ಧಾರವಾಗಲಿದೆ.

Leave a Reply