ಮಧ್ಯ ಪ್ರದೇಶ ಕಮಲ್ ನಾಥ್ ಸರ್ಕಾರಕ್ಕೆ ಆಪತ್ತು! ಬೆಂಗಳೂರಿಗೆ ಬಂದಿಳಿದ 16 ಕಾಂಗ್ರೆಸ್ ಶಾಸಕರು, ಮಂತ್ರಿಗಳು!

ಡಿಜಿಟಲ್ ಕನ್ನಡ ಟೀಮ್:

ಮಧ್ಯ ಪ್ರದೇಶದ ಕಮಲ್ ನಾಥ್ ಸರ್ಕಾರದ 6 ಸಚಿವರು ಹಾಗೂ 10 ಶಾಸಕರು ಸೇರಿದಂತೆ ಒಟ್ಟು 16 ಶಾಸಕರು ದೆಹಲಿಯಿಂದ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಿದ್ದಾರೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.

ಮಧ್ಯ ಪ್ರದೇಶ ಕಾಂಗ್ರೆಸ್ ನಲ್ಲಿ ಇರುವ ಬಿನ್ನಮತವನ್ನು ಬಳಸಿಕೊಂಡು ಬಿಜೆಪಿ ಆಪರೇಷನ್ ಕಮಲ ನಡೆಸುತ್ತಿದ್ದು, 16 ಕಾಂಗ್ರೆಸ್ ನಾಯಕರನ್ನು ಬೆಂಗಳೂರಿಗೆ ಕರೆತರಲಾಗಿದೆ. ಇವರನ್ನು ವಿವಿಧ ಗುಂಪುಗಳಾಗಿ ಬೆಂಗಳೂರಿನ ಹೊರವಲಯದ ರೆಸಾರ್ಟ್ ನಲ್ಲಿ ಇರಿಸಲು ತೀರ್ಮಾನಿಸಲಾಗಿದೆ.

ಈ ಶಾಸಕರನ್ನು ಕಾಪಾಡಿಕೊಳ್ಳುವ ಜವಾಬ್ದಾರಿಯನ್ನು ಅರವಿಂದ ಲಿಂಬಾವಳಿ ಹಾಗೂ ರಾಜ್ಯದ ಇತರೆ ಬಿಜೆಪಿ ನಾಯಕರಿಗೆ ನೀಡಲಾಗಿದೆ. ಇದರೊಂದಿಗೆ ಮಧ್ಯ ಪ್ರದೇಶದ ಕಮಲ್ ನಾಥ್ ಅವರ ಸರ್ಕಾರಕ್ಕೆ ಕಂಟಕ ಎದುರಾಗಿದೆ. ಬೆಂಗಳೂರಿಗೆ ಬಂದ ಕಾಂಗ್ರೆಸ್ ಶಾಸಕರ ಪೈಕಿ 10 ಶಾಸಕರ ಪಟ್ಟಿ ಹೀಗಿದೆ…

Leave a Reply