ಡಿಕೆ ಶಿವಕುಮಾರ್ ಗೆ ಕೆಪಿಸಿಸಿ ಪಟ್ಟ! 20 ವರ್ಷಗಳ ನಂತರ ಒಕ್ಕಲಿಗ ನಾಯಕನಿಗೆ ಸಾರಥ್ಯ!

ಡಿಜಿಟಲ್ ಕನ್ನಡ ಟೀಮ್:

ಸುದೀರ್ಘ ಮೂರು ತಿಂಗಳ ಕಾಲ ಕಾಂಗ್ರೆಸ್ ಹೈಕಮಾಂಡ್ ಅಳೆದು ತೂಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆ ಶಿವಕುಮಾರ್ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದೆ.

ಉಪ ಚುನಾವಣೆಯಲ್ಲಿ ಕಳಪೆ ಫಲಿತಾಂಶ ಬಂದ ನಂತರ ದಿನೇಶ್ ಗುಂಡೂರಾವ್ ಅವರು ರಾಜೀನಾಮೆ ನೀಡಿದ್ದರಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಈ ಸ್ಥಾನಕ್ಕೆ ಪಕ್ಷದೊಳಗೆ ಅನೇಕ ನಾಯಕರು ಟವೆಲ್ ಹಾಕಿದ್ದರು. ಅಂತಿಮವಾಗಿ ಹೈಕಮಾಂಡ್ ಡಿಕೆ ಶಿವಕುಮಾರ್ ಅವರ ಪಕ್ಷ ನಿಷ್ಠೆಯನ್ನು ಪರಿಗಣಿಸಿ ಈ ಹುದ್ದೆ ನೀಡಿದೆ.

ಅಧ್ಯಕ್ಷ ಸ್ಥಾನದ ಜತೆಗೆ ಮೂವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಹಾಲಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ ಹಾಗೂ ಸಲೀಂ ಅಹಮದ್ ಅವರನ್ನು ಆಯ್ಕೆ ಮಾಡಿದೆ.

1999ರಲ್ಲಿ ಎಸ್.ಎಂ ಕೃಷ್ಣ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿತ್ತು. ಈಗ 20 ವರ್ಷಗಳ ನಂತರ ಈ ಹುದ್ದೆಗೆ ಒಕ್ಕಲಿಗ ನಾಯಕರನ್ನು ಆಯ್ಕೆ ಮಾಡಿದೆ.

ಈ ನೇಮಕದೊಂದಿಗೆ ಈಗ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ನೀಡಿದೆ.

Leave a Reply