ಧಾರವಾಡದ ವ್ಯಕ್ತಿಗೆ ಕೊರೊನಾ ಸೋಂಕು

ಡಿಜಿಟಲ್ ಕನ್ನಡ ಟೀಮ್:

ಇತ್ತೀಚೆಗಷ್ಟೇ ಆಸ್ಟ್ರೇಲಿಯಾದಿಂದ ವಾಪಸ್​ ಆಗಿದ್ದ ವ್ಯಕ್ತಿಯೊಬ್ಬ ಗೋವಾ ಮೂಲಕ ಧಾರವಾಡಕ್ಕೆ ಬಂದಿದ್ದು ಈತನಿಗೆ ಸೋಂಕು ತಗುಲಿರುವುದು ಖಚಿತವಾಗಿದೆ.

ಮಾರ್ಚ್​12 ರಂದು ಈತ ವಾಪಸ್ ಆಗಿದ್ದು, ಮಾರ್ಚ್​ 18ರಂದು ಹುಬ್ಬಳ್ಳಿ ಕಿಮ್ಸ್​ಗೆ ದಾಖಲಾಗಿದ್ದ. ಈಗ ಈತನ ಮನೆ ಸುತ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, 3 ಕಿ.ಮೀ ವ್ಯಾಪ್ತಿಯಲ್ಲಿ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ.​ ಸೋಂಕಿತನ ಸಂಪರ್ಕದಲ್ಲಿದ್ದವರ ಪತ್ತೆಗೆ ಕ್ರಮ ಜರುಗಿಸಲಾಗಿದೆ.

Leave a Reply