ಖಾಸಗಿ ಲ್ಯಾಬ್ ಗಳಲ್ಲೂ ಉಚಿತ ಪರೀಕ್ಷೆ ನಡೆಸಿ: ಕೇಂದ್ರಕ್ಕೆ ಸುಪ್ರೀಂ ಸಲಹೆ

ಡಿಜಿಟಲ್ ಕನ್ನಡ ಟೀಮ್:

ನಿರೀಕ್ಷಿತ ಮಟ್ಟದಲ್ಲಿ ಕೊರೋನಾ ಸೋಂಕು ಪರೀಕ್ಷೆ ನಡೆಯದ ಹಿನ್ನೆಲೆಯಲ್ಲಿ ಖಾಸಗಿ ಲ್ಯಾಬ್ ಗಳಲ್ಲಿ ಕೊರೋನಾ ಸೋಂಕು ಪರೀಕ್ಷೆಯನ್ನು ಉಚಿತವಾಗಿ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ.

ನ್ಯಾಯಮೂರ್ತಿ ಅಶೋಕ್ ಭೂಷಣ್ ಹಾಗೂ ನ್ಯಾಯಮೂರ್ತಿ ರವೀಂದ್ರ ಭಟ್ ಅವರ ಪೀಠ, ಖಾಸಗಿ ಲ್ಯಾಬ್ ಗಳು ಈ ಪರೀಕ್ಷೆಗೆ ಶುಲ್ಕ ಪಡೆಯಬಾರದು. ಈ ಲ್ಯಾಬ್ ಗಳಿಗೆ ಸರ್ಕಾರದ ಹಣ ಪಾವತಿಸಬೇಕು. ಇದಕ್ಕೆ ಸರಿಯಾದ ಮಾರ್ಗದರ್ಶನ ರಚಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಈ ವಿಚಾರವಾಗಿ ನ್ಯಾಯಾಲಯಕ್ಕೆ ಮಾಹಿತಿ ನೀಡಿದ ಸಾಲಿಸಿಟರ್ ಜೆನರಲ್ ತುಷಾರ್ ಮೆಹ್ತಾ, ಈ ಹಿಂದೆ 118 ಲ್ಯಾಬ್ ಗಳಲ್ಲಿ ನಿತ್ಯ 15 ಸಾವಿರ ಪರೀಕ್ಷೆ ಮಾಡಲಾಗುತ್ತಿತ್ತು. ನಂತರ 47 ಖಾಸಗಿ ಲ್ಯಾಬ್ ಗಳು ಕೂಡ ಇದಕ್ಕೆ ಸೇರ್ಪಡೆಯಾಗಿವೆ. ಖಾಸಗಿ ಲ್ಯಾಬ್ ಗಳಲ್ಲಿ ಕೊರೋನಾ ಸೋಂಕು ಪರೀಕ್ಷೆಗೆ 4,500 ರೂಪಾಯಿ ಶುಲ್ಕ ವಿಧಿಸಲು ಅವಕಾಶ ನೀಡಲಾಗಿದೆ ಎಂದರು.

Leave a Reply