ಕೇಂದ್ರದಿಂದ ಲಾಕ್ ಡೌನ್ 2.0 ಮಾರ್ಗಸೂಚಿ ಪ್ರಕಟ; ಏನಿರುತ್ತೆ, ಏನಿರಲ್ಲ?

ಡಿಜಿಟಲ್ ಕನ್ನಡ ಟೀಮ್:

ಮೊದಲ ಹಂತದ ಲಾಕ್ ಡೌನ್ ನಿಂದ ನಿರೀಕ್ಷಿತ ಮಟ್ಟದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮೇ3ರವರೆಗೆ ಲಾಕ್ ಡೌನ್ ವಿಸ್ತರಿಸಿದೆ. ಎರಡನೇ ಹಂತದ ಈ ಲಾಕ್ ಡೌನ್ ಹೇಗಿರಬೇಕು ಎಂಬುದರ ಬಗ್ಗೆ ಕೇಂದ್ರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಇದನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಲೇಬೇಕಾಗಿದೆ. ಈ ಮಾರ್ಗಸೂಚಿಯಲ್ಲಿ ಯಾವುದನ್ನು ತೆರೆಯಲು ಅನುಮತಿ ನೀಡಲಾಗಿದೆ, ಯಾವುದಕ್ಕೆ ಅನುಮತಿ ನೀಡಲಾಗಿಲ್ಲ ಎಂಬುದು ಹೀಗಿದೆ…

ಏನೆಲ್ಲಾ ಇರಲಿದೆ?
• ಎಲ್ಲಾ ಆಸ್ಪತ್ರೆಗಳು ತೆರೆಯಲಿದ್ದು, ಎಲ್ಲಾ ರೀತಿಯ ರೋಗಿಗಳಿಗೂ ಸೂಕ್ತ ಚಿಕಿತ್ಸೆ.
• ಆಸ್ಪತ್ರೆಗೆ ಸಂಬಂಧಿಸಿದ ಎಲ್ಲಾ ಪ್ರಯೋಗಾಲಯ, ಮೆಡಿಕಲ್ ಶಾಪ್ ಎಲ್ಲವೂ ತೆರೆದಿರಲಿವೆ.
• ರೈತರು ಕೃಷಿ ಮತ್ತು ತೋಟಗಾರಿಕೆಯಲ್ಲಿ ತೊಡಗಲು ಅವಕಾಶ ಮಾಡಿಕೊಡಲಾಗಿದೆ.
• ರೈತರಿಗಾಗಿ ಗೊಬ್ಬರು, ಬೀಜ ಮತ್ತು ಕೃಷಿ ಸಲಕರಣೆಗಳನ್ನು ಮಾರಾಟ ಮಾಡುವ ಕಂಪೆನಿಗಳು ಕಾರ್ಯ ಆರಂಭಿಸಲು ಅವಕಾಶ.
• ಆಹಾರದ ಸರಪಳಿ ಅನುಕೂಲವಾಗಲು ರೈತರಿಂದ ಪದಾರ್ಥಗಳನ್ನು ಕೊಂಡು ಮಾರುಕಟ್ಟೆಗೆ ಸಾಗಿಸುವ ಎಲ್ಲಾ ಮಾದರಿಯ ಸಂಪರ್ಕಕ್ಕೂ ಕೇಂದ್ರ ಹಸಿರು ನಿಶಾನೆ ನೀಡಿದೆ.
• ಗ್ರಾಮೀಣ ಭಾಗದಲ್ಲಿ ಎಂಎನ್‌ಆರ್‌ಇಜಿಎ (MNREGA) ಕೆಲಸಗಳಿಗೆ ಅನುಮತಿ.
• ಅಡಿಗೆ ಅನಿಲ ಪೂರೈಕೆ, ನೀರು ಸರಬರಾಜು ಹಾಗೂ ಶುಚಿ ಕೆಲಸದಲ್ಲಿ ತೊಡಗಿರುವವರಿಗೆ ಯಾವುದೇ ಅಡ್ಡಿ ಇಲ್ಲ.
• ಗೂಡ್ಸ್‌ ರೈಲು ಸಂಚಾರ ಮುಂದುವರಿಕೆ.
• ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳ ಕಾರ್ಯ ಮುಂದುವರಿಕೆ.
• IT ಉದ್ಯಮದಲ್ಲಿ ಕಂಪನಿಗಳು ಶೇ.50 ರಷ್ಟು ಉದ್ಯೋಗಿಗಳ ಜೊತೆಗೆ ಕಚೇರಿಯಲ್ಲಿ ಕೆಲಸ ಮಾಡಲು ಅನುಮತಿ.
• ಗ್ರಾಮ ಪಂಚಾಯತಿ ಮಟ್ಟದ ಸರ್ಕಾರಿ ಕಚೇರಿಗಳನ್ನು ತೆರೆಯಲಾಗುವುದು.
• ವಿಶೇಷ ಆರ್ಥಿಕ ವಲಯದ ಅಡಿಯಲ್ಲಿ ಬರುವ ಎಲ್ಲಾ ಕೈಗಾರಿಕೆಗಳು ಹಾಗೂ ಆಹಾರ ಸಂರಕ್ಷಣಾ ಘಟಕಗಳು ಎಂದಿನಂತೆ ಕಾರ್ಯಾರಂಭ ಮಾಡಬಹುದು. ಆದರೆ, ಉದ್ಯೋಗಿಗಳನ್ನು ಸಾಮಾಜಿಕ ಅಂತರದ ನಿಮಯಮಗಳಿಗೆ ಅನುಸಾರವಾಗಿ ಕೈಗಾರಿಕೆಗಳಿಗೆ ಕರೆತರಬೇಕು. ಉತ್ತಮ ಸಾರಿಗೆ ವ್ಯವಸ್ಥೆ ನೀಡಬೇಕು.
• ರಸ್ತೆ, ನೀರಾವರಿ, ಕಟ್ಟಡ ಸೇರಿದಂತೆ ಅಭಿವೃದ್ಧಿ ಕಾರ್ಯಚಟುವಟಿಕೆಗಳಿಗೆ ಹಸಿರು ನಿಶಾನೆ.
• ಆರೋಗ್ಯ ಸೇವೆ ಸೇರಿದಂತೆ ತುರ್ತು ಸಂದರ್ಭದಲ್ಲಿ ಮಾತ್ರ ಖಾಸಗಿ ವಾಹನ ಓಡಾಡಕ್ಕೆ ಅವಕಾಶ.
• ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ ರಕ್ಷಣಾ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆಹಾರ ಇಲಾಖೆ ತೆರೆಯಲಿವೆ.
• ರಾಜ್ಯ ಸರ್ಕಾರದ ಪೊಲೀಸ್ ಇಲಾಕೆ, ಗೃಹ ರಕ್ಷಕ ದಳ, ಜಿಲ್ಲಾಡಳಿತ, ಖಜಾನೆ ಇಲಾಖೆಗಳು ಸೇವೆ ಮುಂದುವರಿಕೆ.

ಏನಿರಲ್ಲ?
• ರಾಷ್ಟ್ರೀಯ-ಅಂತಾರಾಷ್ಟ್ರೀಯ ವಿಮಾನ, ರೈಲು ಸೇವೆಗಳು ಮತ್ತು ಬಸ್‌ ಸಂಚಾರ ಮೇ 03ರ ವರೆಗೆ ಸೇವೆ ಸ್ಥಗಿತ.

  • ಮದ್ಯ ಮಾರಾಟಕ್ಕೆ ಕೇಂದ್ರ ಬ್ರೇಕ್.
    • ಎಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳು ಸ್ಥಗಿತ.
    • ಧಾರ್ಮಿಕ ಕ್ಷೇತ್ರಗಳು ಬಂದ್.
    • ಹಾಟ್‌ಸ್ಪಾಟ್‌ ಎಂದು ಗುರುತಿಸಲಾಗಿರುವ ಪ್ರದೇಶಗಳಿಗೆ ಹೊರಗಿನಿಂದ ಯಾರ ಪ್ರವೇಶಕ್ಕೂ ಅನುಮತಿ ಇಲ್ಲ.
    • ಸಾರ್ವಜನಿಕ ಸಮಾರಭಗಳಿಗೂ ತಡೆ.
    • ಚಿತ್ರ ಮಂದಿರಗಳು, ಮಾಲ್‌ಗಳು, ಶಾಪಿಂಗ್ ಕಾಂಪ್ಲೆಕ್ಸ್‌ಗಳು, ಈಜುಕೊಳ ಸೇರಿದಂತೆ ಎಲ್ಲಾ ಕ್ರೀಡಾ ಮತ್ತು ಮನರಂಜನಾ ಕ್ಷೇತ್ರಗಳು ಬಂದ್.
    • ಯಾರೇ ಮೃತರಾದರೂ 20ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ.
    • ಯಾವುದೇ ಖಾಸಗಿ ವಾಹನ ಸಾರಿಗೆಗೆ ಅವಕಾಶ ಇಲ್ಲ.

Leave a Reply