ಡಿಜಿಟಲ್ ಕನ್ನಡ ಟೀಮ್:
ಮದ್ಯ ಕೊಳ್ಳಲು ಜನ ಮಳಿಗೆಗಳ ಮುಂದೆ ಸಾಲಾಗಿ ನಿಲ್ಲುವುದರಿಂದ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗುವುದರಿಂದ ಮದ್ಯ ಮಾರಟಾ ಮಾಡುವ ಬದಲು ಮನೆಗಳಿಗೆ ಹೋಂ ಡೆಲಿವರಿ ಮಾಡಿ ಎಂದು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಮಳಿಗೆಗಳಲ್ಲಿ ಮದ್ಯ ಮಾರಾಟ ಮಾಡುವುದರಿಂದ ಜನ ಹೆಚ್ಚಾಗಿ ಸೇರುತ್ತಾರೆ. ಆಗ ವೈರಸ್ ಹರಡುವ ಸಾಧ್ಯತೆ ಇದೆ. ಹೀಗಾಗಿ ಸಾಮಾಜಿಕ ಅಂತರದ ದೃಷ್ಟಿಯಿಂದ ಆನ್ಲೈನ್ ಮೂಲಕ ಮನೆ ಬಾಗಿಲಿಗೆ ಮದ್ಯ ಸರಬರಾಜು ಮಾಡುವುದು ಸೂಕ್ತ ಎಂದು ರಾಜ್ಯ ಸರ್ಕಾರಗಳಿಗೆ ಸಲಹೆ ನೀಡಿದೆ.
ಈ ಹಿಂದೆ ಲಾಕ್ಡೌನ್ಗೆ ಮುಂಚಿತವಾಗಿಯೇ ಮದ್ಯವನ್ನು ಆನ್ಲೈನ್ ಮೂಲಕ ಮಾರಾಟ ಮಾಡಬಹುದು ಹಾಗೂ ಈ ಮೂಲಕ ಅಬಕಾರಿ ಇಲಾಖೆ ಅಧಿಕ ಲಾಭ ಗಳಿಸಬಹುದು ಎಂದು ಅಬಕಾರಿ ಸಚಿವ ಹೆಚ್. ನಾಗೇಶ್ ಸರ್ಕಾರದ ಮುಂದೆ ಪ್ರಸ್ತಾವನೆಯೊಂದನ್ನು ಇಟ್ಟಿದ್ದರು. ಅದಕ್ಕೆ ವ್ಯಾಪಕ ಟೀಕೆಯೂ ವ್ಯಕ್ತವಾಗಿತ್ತು.
ಇನ್ನು ನಾಳೆಯಿಂದ ಕೆಂಪು ವಲಯ ಹೊರತಾಗಿ ಉಳಿದ ಪ್ರದೇಶಗಳಲ್ಲಿ ಮದ್ಯವನ್ನು ಬಾರ್, ಲಾಡ್ಜ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಮಾರಲು ಸರ್ಕಾರ ನಿರ್ಧರಿಸಿದೆ ಎಂದು ಅಬಕಾರಿ ಸಚಿವ ನಾಗೇಶ್ ತಿಳಿಸಿದ್ದಾರೆ.