ಡಿಜಿಟಲ್ ಕನ್ನಡ ಟೀಮ್:
ದೇಶದಲ್ಲಿ ದಿನೇದಿನೆ ಕೊರೋನಾ ಸೋಂಕು ತನ್ನ ಉಗ್ರ ಸ್ವರೂಪ ಹೆಚ್ಚಿಸುತ್ತಿದ್ದು, ಕಳೆದ 24 ಗಂಟೆಯಲ್ಲಿ 9,851 ಸೋಂಕು ಪ್ರಕರಣಗಳು ದಾಖಲಾಗಿದ್ದು, 273 ಮಂದಿ ಸತ್ತಿದ್ದಾರೆ.
ಈವರೆಗೂ ಒಂದು ದಿನದಲ್ಲಿ ದಾಖಲಾಗಿರುವ ಗರಿಷ್ಠ ಸೋಂಕು ಪ್ರಕರಣವಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,26,770ಕ್ಕೆ ಏರಿಕೆಯಾಗಿದೆ. ಇನ್ನು ಈವರೆಗೂ 1,09,462 ಮಂದಿ ಗುಣಮುಖರಾಗಿದ್ದಾರೆ. ಇನ್ನು ದೇಶದಲ್ಲಿ ಸೋಂಕಿನಿಂದ ಗುಣಮುಖರಾಗುವವರ ಪ್ರಮಾಣ ಶೇ.48.27ರಷ್ಟಿದೆ. ವಿಶ್ವ ಸೋಂಕಿತ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಏಳನೇ ಸ್ಥಾನದಲ್ಲಿದೆ.
ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ದೇಶ ಈಗ ಮೊದಲ ಹಂತದ ಅನ್ ಲಾಕ್ ನಲ್ಲಿದದ್ ಮುಂದಿನ ದಿನಗಳಲ್ಲಿ ಮತ್ತಷ್ಟು ಲಾಕ್ ಡೌನ್ ಸಡಿಲ ಮಾಡಲಾಗುವ ಸುಳಿವು ನೀಡಿದ್ದಾರೆ. ಈ ನಡುವೆ ಸೋಂಕು ಪ್ರಕರಣ ಹೆಚ್ಚುತ್ತಿದ್ದು ಆತಂಕ ಮೂಡಿಸಿದೆ.
ಸೋಂಕು ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲೆ ತೆರೆಯದಂತೆ ಮಕ್ಕಳ ಪೋಷಕರು ಸರ್ಕಾರಕ್ಕೆ ಆಗ್ರಹಿಸುತ್ತಿದ್ದಾರೆ. ಇನ್ನು ಪದವಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಹಿಂಜರಿಯುತ್ತಿದ್ದಾರೆ.