ಬೆಂಗಳೂರು ಮತ್ತೆ ಲಾಕ್ ಡೌನ್ ಆಗಲ್ಲ: ಸಿಎಂ ಯಡಿಯೂರಪ್ಪ

ಡಿಜಿಟಲ್ ಕನ್ನಡ ಟೀಮ್:

ಬೆಂಗಳೂರಿನಲ್ಲಿ ಲಾಕ್ ಡೌನ್ ಮುಂದುವರಿಸುವ ಮಾತು ಎತ್ತಬೇಡಿ. ರಾಜ್ಯದಲ್ಲಿ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಬೇಕು. ಪರೀಕ್ಷೆಯ ಫಲಿತಾಂಶ ದೊರೆತ ಎರಡು ಗಂಟೆಗಳೊಳಗೆ ಹಾಸಿಗೆ ಹಂಚಿಕೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೋವಿಡ್ ನಿಯಂತ್ರಣ ಸಂಬಂಧ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು ಉಸ್ತುವಾರಿಗಳ ಸಭೆ ನಡೆಸಿದ್ದು ಮತ್ತೆ ಬೆಂಗಳೂರಿನಲ್ಲಿ ಲಾಕ್ ಡೌನ್ ಪ್ರಶ್ನೆ ಇಲ್ಲ ಎಂದಿದ್ದಾರೆ. ಈ ವೇಳೆ ಅವರು ಹೇಳಿದ್ದಿಷ್ಟು…

ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ. ಲಾಕ್ ಡೌನ್ ಮುಂದುವರೆಸುವ ಯಾವುದೇ ಯೋಜನೆ ಸರ್ಕಾರದ ಮುಂದೆ ಇಲ್ಲ. ರೋಗ ಲಕ್ಷಣ ಇರುವ, 65 ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ಮೊದಲ ಆದ್ಯತೆಯ ಮೇರೆಗೆ ಚಿಕಿತ್ಸೆ ನೀಡಬೇಕು. ರೋಗ ಲಕ್ಷಣ ಇಲ್ಲದವರನ್ನು ಕೋವಿಡ್ ಕೇರ್ ಸೆಂಟರ್​ಗೆ ದಾಖಲಿಸಬೇಕು.

ವೈದ್ಯರ ಕೊರತೆ ನಿವಾರಿಸಲು, ಹುದ್ದೆ ಭರ್ತಿ ಪ್ರಕ್ರಿಯೆ ನಡೆಯುತ್ತಿದೆ. ಪ್ರತಿ ವಾರ್ಡಿನಲ್ಲೂ ಸ್ವಯಂ ಸೇವಕರನ್ನು ಗುರುತಿಸಲಾಗಿದೆ ಹಾಗೂ ಅಂಬ್ಯುಲೆನ್ಸ್ ನಿಗದಿಪಡಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಬೆಡ್ ನೀಡದೆ ಇದ್ದರೆ ಕಠಿಣ ಕ್ರಮ ಕೈಗೊಳ್ಳಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ದಾಖಲಾತಿ ಮತ್ತು ಹಾಸಿಗೆಗಳ ಲಭ್ಯತೆ ಕುರಿತು ಮಾಹಿತಿ ಪಡೆಯಿರಿ.

Leave a Reply