ಸಂಕಷ್ಟದಲ್ಲಿರುವ ಜನರ ಆರ್ಥಿಕ ಹೊರೆ ಕಡಿಮೆ ಮಾಡಲು ಆಸ್ತಿ ತೆರಿಗೆ ಮನ್ನಾ ಮಾಡಿ: ಡಿ.ಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್:

ಕೋವಿಡ್ 19ರ ಪಿಡುಗಿನಿಂದ ಜನರು ಆರ್ಥಿಕ ಒತ್ತಡಕ್ಕೆ ಸಿಲುಕಿದ್ದು, ಅವರ ಮೇಲಿನ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ಸರ್ಕಾರ ಒಂದು ವರ್ಷ ಆರ್ಥಿಕ ತೆರಿಗೆಯನ್ನು ಮನ್ನಾ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಕೊರೊನಾ ವೈರಸ್‌ನಿಂದಾಗಿ ಕಳೆದ ನಾಲ್ಕು ತಿಂಗಳಿನಿಂದ ಸರಿಯಾಗಿ ಕೆಲಸವಿಲ್ಲದೇ ರಾಜ್ಯದ ನಾಗರಿಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಆವರ ಮೇಲಿನ ಆರ್ಥಿಕ ಹೊರೆಯನ್ನು ಇಳಿಸುವ ಜವಾಬ್ದಾರಿ ಸರಕಾರದ ಮೇಲಿದೆ. ಮಾನವೀಯತೆಯ ದೃಷ್ಟಿಯಿಂದ ಒಂದು ವರ್ಷ ರಾಜ್ಯದಲ್ಲಿ ಎಲ್ಲ ರೀತಿಯ ಆಸ್ತಿ ತೆರಿಗೆಯನ್ನು ಮನ್ನಾ ಮಾಡಬೇಕು. ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯತ್ತಿಗಳಲ್ಲೂ ಆಸ್ತಿ ತೆರಿಗೆಯನ್ನು ವಸೂಲಿ ಮಾಡಬಾರದು ಎಂದು ಆಗ್ರಹಿಸಿ ಟ್ವೀಟ್ ಮಾಡಿದ್ದಾರೆ.

Leave a Reply