ರಾಮ ಮಂದಿರ ನಿರ್ಮಾಣದಲ್ಲಿ ಮೋದಿ ಕೊಡುಗೆ ಶೂನ್ಯ: ಸುಬ್ರಮಣಿಯನ್ ಸ್ವಾಮಿ

ಡಿಜಿಟಲ್ ಕನ್ನಡ ಟೀಮ್:

ಅಯೋಧ್ಯೆ ರಾಮ ಮಂದಿರ ನಿರ್ಮಾಣ ವಿಚಾರವಾಗಿ ಸುಪ್ರೀಂ ಕೊರ್ಟ್ ನಿರ್ಧಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಯಾವುದೇ ಪರಿಣಾಮಕಾರಿ ಹೆಜ್ಜೆ ಇಟ್ಟಿಲ್ಲ. ರಾಮ ಮಂದಿರ ನಿರ್ಮಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆ ಶೂನ್ಯ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ತಿಳಿಸಿದ್ದಾರೆ.

ಟಿವಿ9 ಭರತವರ್ಷ (ಉತ್ತರ ಪ್ರದೇಶದ ವಾಹಿನಿ)ಗೆ ನೀಡಿದ ಹೇಳಿಕೆಯಲ್ಲಿ ಸುಬ್ರಮಣಿಯನ್ ಸ್ವಾಮಿ ಈ ಹೇಳಿಕೆ ನೀಡಿರುವುದು ದಾಖಲಾಗಿದೆ ಎಂದು ಸ್ಕ್ರೋಲ್ ವರದಿ ಮಾಡಿದೆ.

ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ದತ್ತಾಂಶ ಸಲ್ಲಿಸಿ ವಾದ ಮಂಡಿಸಿದವರು ನಾವು. ರಾಮ ಮಂದಿರ ನಿರ್ಮಾಣ ಪರವಾಗಿ ಸುಪ್ರೀಂ ಕೋರ್ಟ್ ನಲ್ಲಿ ತೀರ್ಪು ಬರುವಂತೆ ಕೇಂದ್ರ ಸರ್ಕಾರ ಯಾವುದೇ ಪರಿಣಾಮಕಾರಿ ಹೆಜ್ಜೆ ಇಟ್ಟಿಲ್ಲ.

ಇನ್ನು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಬೇಕು ಎಂದು ವಿಚಾರ ಎತ್ತಿದವರಲ್ಲಿ ಕಾಂಗ್ರೆಸ್ ನಾಯಕ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಪಿ.ವಿ ನರಸಿಂಹ ರಾವ್, ವಿಶ್ವ ಹಿಂದೂ ಪರಿಷದ್ ನ ಅಶೋಕ್ ಸಿಂಘಲ್ ಅವರು ಪ್ರಮುಖರು ಎಂದು ಸುಬ್ರಮಣಿಯನ್ ಸ್ವಾಮಿ ತಿಳಿಸಿದ್ದಾರೆ.

Leave a Reply