ಮಾತೃ ಭಾಷೆಯಲ್ಲಿ ಕಲಿಕೆಗೆ ಅವಕಾಶ: ಪ್ರಧಾನಿ ನರೇಂದ್ರ ಮೋದಿ

ಡಿಜಿಟಲ್ ಕನ್ನಡ ಟೀಮ್:

‘ಮಕ್ಕಳು ತಮ್ಮ ಮಾತೃಭಾಷೆಯಲ್ಲಿ ಬಹುಬೇಗ ಕಲಿಯುತ್ತಾರೆ. ಹೀಗಾಗಿ ಐದನೇ ತರಗತಿವರೆಗೂ ಮಕ್ಕಳು ಮಾತೃಭಾಷೆಯಲ್ಲಿ ಕಲಿಯಲು ಅವಕಾಶ ಮಾಡಿಕೊಡಲಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಹಾಗೂ ಯುಜಿಸಿ ಸಹಯೋಗದಲ್ಲಿ ಹಾಗೂ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ನಡೆದ ಉನ್ನತ ಶಿಕ್ಷಣದಲ್ಲಿ ಮಹಾ ಪರಿವರ್ತನೆ ಸಮಾವೇಶದಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಶುಕ್ರವಾರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಿಷ್ಟು…

‘ಮಕ್ಕಳು ತಮ್ಮ ಮಾತೃ ಭಾಷೆಯಲ್ಲಿ ವಿಚಾರಗಳನ್ನು ಬೇಗ ಕಲಿಯುತ್ತಾರೆ. ಹೀಗಾಗಿ, ಐದನೇ ತರಗತಿವರೆಗೆ ಮಕ್ಕಳ ಮಾತೃಭಾಷೆಯಲ್ಲೇ ಶಿಕ್ಷಣ ನೀಡಲು ಒಪ್ಪಿಗೆ ನೀಡಲಾಗಿದೆ.

ಕಳೆದ ಹಲವು ವರ್ಷಗಳಿಂದ ಶಿಕ್ಷಣ ನೀತಿಯಲ್ಲಿ ಯಾವುದೇ ಬದಲಾವಣೆ ಮಾಡಿರಲಿಲ್ಲ. ಹೊಸ ವ್ಯವಸ್ಥೆಗೆ ತಕ್ಕಂತೆ ಶಿಕ್ಷಣ ನೀತಿಯಲ್ಲಿ ಬದಲಾವಣೆ ಮಾಡಿ, ಎನ್​ಇಪಿ 2020 ರೂಪಿಸಲಾಗಿದೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿಚಾರವಾಗಿ ನಾಲ್ಕು ವರ್ಷಗಳ ಕಾಲ ಅಧ್ಯಯನ ನಡೆಸಲಾಗಿದೆ.

ಜುಲೈ 29ರಂದು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಂಗೀಕರಿಸಲಾಗಿದೆ. ಹೊಸ ಕಾನೂನಿನ ಅಡಿಯಲ್ಲಿ ವಿಶ್ವದ ಅಗ್ರ 100 ವಿಶ್ವ ವಿದ್ಯಾಲಯಗಳು ನಮ್ಮ ದೇಶದಲ್ಲಿ ಕಾರ್ಯ ನಿರ್ವಹಿಸಬಹುದಾಗಿದೆ. ಶೈಕ್ಷಣಿಕ ಹೊರೆಯನ್ನು ಕಡಿಮೆಗೊಳಿಸುವುದು, ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆಯ ವ್ಯಾಪ್ತಿಯನ್ನು ವಿಸ್ತರಿಸುವುದು, ಪಠ್ಯಕ್ರಮದಲ್ಲಿ ಪ್ರಮುಖ ಬದಲಾವಣೆ ಸೇರಿದಂತೆ ಹಲವು ಹೊಸ ನೀತಿಗಳನ್ನು ಇದರಲ್ಲಿ ಪ್ರಸ್ತಾಪಿಸಲಾಗಿದೆ.’

Leave a Reply