ಸುಶಾಂತ್​ ಸಾವಿನ ಪ್ರಕರಣ ತನಿಖೆ ಸಿಬಿಐಗೆ ವಹಿಸಿ; ಸುಪ್ರೀಂ ಕೋರ್ಟ್ ಆದೇಶ

ಡಿಜಿಟಲ್ ಕನ್ನಡ ಟೀಮ್:

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣ ವಿಚಾರಣೆಯನ್ನು ಸಿಬಿಐಗೆ ವಹಿಸುವಂತೆ ಸುಪ್ರೀಂಕೋರ್ಟ್ ಬುಧವಾರ ಆದೇಶಿಸಿದೆ.

ನಟಿ ರಿಯಾ ಚಕ್ರವರ್ತಿ ವಿರುದ್ಧ ನಟ ಸುಶಾಂತ್​ ಅವರ ತಂದೆ ಬಿಹಾರದ ಪಾಟ್ನದಲ್ಲಿ ದಾಖಲಿಸಿರುವ ಪ್ರಕರಣವನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ರಿಯಾ ಚಕ್ರವರ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಹೃಷಿಕೇಶ ರಾಯ್, ಪ್ರಕರಣದ ತನಿಖೆಯನ್ನು ಸಿಬಿಐ ಮುಂದುವರೆಸಲಿದೆ ಎಂದು ಆದೇಶ ನೀಡಿದ್ದಾರೆ.

ಪಾಟ್ನಾದಲ್ಲಿ ದಾಖಲಾಗಿದ್ದ ಎಫ್ಐಆರ್ ಸಿಂಧುವಿಲ್ಲ. ಅದನ್ನು ಮುಂಬೈಗೆ ವರ್ಗಾಯಿಸಬೇಕೆಂದು ರಿಯಾ ಮಾಡಿಕೊಂಡ ಮನವಿಯನ್ನೂ ಕೋರ್ಟ್ ತಿರಸ್ಕರಿಸಿದೆ. ಪಾಟ್ನಾದಲ್ಲಿ ದಾಖಲಾಗಿರುವ ಎಫ್ಐಆರ್ ಸರಿಯಾಗಿಯೇ ಇದೆ ಎಂದು ಅಭಿಪ್ರಾಯಪಟ್ಟಿದೆ. ಮಹಾರಾಷ್ಟ್ರ ಸರ್ಕಾರ ಸಿಬಿಐ ತನಿಖೆಗೆ ಸಹಕರಿಸಬೇಕು ಹಾಗೂ ಮಹಾರಾಷ್ಟ್ರ ಪೊಲೀಸರು ಅಗತ್ಯ ದಾಖಲೆಗಳನ್ನು ಸಿಬಿಐಗೆ ಒದಗಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ಸುಪ್ರೀಂಕೋರ್ಟ್ ತೀರ್ಪಿನ ನಂತರ ಟ್ವೀಟ್ ಮಾಡಿರುವ ನಟಿ ಕಂಗನಾ, ‘ಇದು ಮಾನವೀಯತೆ ಗೆಲುವು. ಸುಶಾಂತ್ ಪರ ಧ್ವನಿ ಎತ್ತಿದ ಎಲ್ಲರಿಗೂ ಅಭಿನಂದನೆಗಳು. ಇದು ಬಾಲಿವುಡ್ ಮಾಫಿಯಾ ವಿರುದ್ಧದ ಗೆಲುವು’ ಎಂದು ಹೇಳಿದ್ದಾರೆ.

Leave a Reply