ಗಾನ ಗಂಧರ್ವ ಎಸ್ ಪಿ ಬಾಲಸುಬ್ರಹ್ಮಣ್ಯಂ ವಿಧಿವಶ

ಡಿಜಿಟಲ್ ಕನ್ನಡ ಟೀಮ್:

ದೇಶ ಕಂಡ ಮಹಾನ್ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ(74) ಅವರು ಶುಕ್ರವಾರ ವಿಧಿವಶರಾಗಿದ್ದಾರೆ.

ಕೊರೋನಾ ಸೋಂಕಿನಿಂದಾಗಿ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ 51 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಈ ವಿಚಾರವನ್ನು ಅವರ ಪುತ್ರ ಚರಣ್​ ಖಚಿತಪಡಿಸಿದ್ದಾರೆ.

ಸಂಗೀತ ಕ್ಷೇತ್ರದಲ್ಲಿ ಇವರ ಸಾಧನೆಗೆ ಪದ್ಮಶ್ರೀ, ಪದ್ಮ ಭೂಷಣ ಹಾಗೂ 6 ರಾಷ್ಟ್ರ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಇವರ ಮುಡಿಗೇರಿತ್ತು.

ಕನ್ನಡದ ಸಾಹಿತಿ ಉಪೇಂದ್ರ ಕುಮಾರ್ ಅವರಿಗಾಗಿ ಕೇವಲ 12 ಗಂಟೆಗಳಲ್ಲಿ 2 ಹಾಡುಗಳನ್ನು ಹಾಡಿ ದಾಖಲೆ​ ಮಾಡಿದ್ದರು. ಒಂದೇ ದಿನದಲ್ಲಿ ತಮಿಳು ಹಾಗೂ ತೆಲುಗಿನಲ್ಲಿ 19 ಹಾಡುಗಳನ್ನೂ ಹಾಡಿದ್ದರು. ಅಂತೆಯೇ ಹಿಂದಿಯಲ್ಲಿ 16 ಹಾಡುಗಳನ್ನು ಹಾಡಿದ್ದು ಎಸ್ ಪಿಬಿ ಅವರ ಸಾಧನೆಗೆ ಸಾಕ್ಷಿ.

Leave a Reply