ವಿಜಯನಗರ ಪ್ರತ್ಯೇಕ ಜಿಲ್ಲೆಗೆ ಒಪ್ಪಿಗೆ, ಡಿ.7ರಿಂದ ಚಳಿಗಾಲದ ಅಧಿವೇಶನ; ಸಂಪುಟ ಸಭೆಯಲ್ಲಿ ತೀರ್ಮಾನ

ಡಿಜಿಟಲ್ ಕನ್ನಡ ಟೀಮ್:

ಬಳ್ಳಾರಿಯ ಪಶ್ಚಿಮ ಭಾಗದ 6 ತಾಲೂಕು ಒಳಗೊಂಡ ವಿಜಯನಗರ ಪ್ರತ್ಯೇಕ ಜಿಲ್ಲೆ ರಚನೆ ಹಾಗೂ ಡಿ.7ರಿಂದ 15ರವರೆಗೆ ಚಳಿಗಾಲದ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಮ್ಮತಿ ನೀಡಿದೆ.

ಇಂದು ನಡೆದ ಸಭೆಯಲ್ಲಿ ಪ್ರತ್ಯೇಕ ಜಿಲ್ಲೆಗೆ ತಾತ್ವಿಕ ಒಪ್ಪಿಗೆ ನೀಡಲಾಗಿದ್ದು, ಜಿಲ್ಲೆ ರಚನೆ ಕುರಿತ ಪ್ರಕ್ರಿಯೆ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲು ನಿರ್ಧರಿಸಲಾಗಿದೆ.

ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ದೆಹಲಿಗೆ ಪ್ರಯಾಣ ಬೆಳೆಸುವ ಹಿನ್ನೆಲೆಯಲ್ಲಿ ಇಂದಿನ ಸಚಿವ ಸಂಪುಟ ಸಭೆಯನ್ನು 20 ನಿಮಿಷಕ್ಕೆ ಮುಕ್ತಾಯಗೊಳಿಸಲಾಯಿತು. ಈ ಸಭೆಯಲ್ಲಿ ಸಂಪುಟ ಪುನಾರಚನೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂಬ ಮಾಹಿತಿ ಬಂದಿದೆ.

Leave a Reply