ಡಿ.ಕೆ ಶಿವಕುಮಾರ್ ಮನೆಗೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಭೇಟಿ

ಡಿಜಿಟಲ್ ಕನ್ನಡ ಟೀಮ್:

ಡಿ.ಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿ ಗಲಭೆ ವೇಳೆ ತಮ್ಮ ಮನೆ ಮೇಲಿನ ದಾಳಿ ವಿಚಾರವಾಗಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದರು.

ಇತ್ತೀಚೆಗೆ ಪ್ರಕರಣದಲ್ಲಿ ಪಿತೂರಿ ನಡೆಸಿರುವ ಆರೋಪದಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಬಂಧನ ನಂತರ ಶಾಸಕ ಶ್ರೀನಿವಾಸ ಮೂರ್ತಿ ಅವರು ಕೆಪಿಸಿಸಿ ಅಧ್ಯಕ್ಷರು ತಮ್ಮ ಪರ ನಿಲ್ಲಬೇಕು ಎಂದು ಹೇಳಿಕೆ ಕೊಟ್ಟಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಶಿವಕುಮಾರ್ ಅವರಿ, ನಾನು ಮೊದಲಿನಿಂದಲೂ ಅಖಂಡ ಅವರ ಪರವಾಗಿಯೇ ಇದ್ದೇನೆ. ಅವರು ನನ್ನ ಬಳಿ ಬಂದು ಮಾತನಾಡಲಿ ಎಂದು ತಿಳಿಸಿದ್ದರು.

ಈ ಹಿನ್ನೆಲೆಯಲ್ಲಿ ಅಖಂಡ ಶ್ರೀನಿವಾಸ ಮೂರ್ತಿ ಅವರು ಇಂದು ಡಿ.ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ಮಾಡಿ ತಮ್ಮ ಮನವಿ, ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

Leave a Reply